AMRUTH~1
[00:02.04] ಎಲ್ಲಾ ಶಿಲ್ಪಗಳಿಗು ಒಂದೊಂದು ಹಿಂದಿನ ಕಥೆಯಿದೆ
[00:10.79] ನನ್ನ ಶಿಲ್ಪ ಚೆಲುವೆ ಇವಳ ಮುಂದೆನ್ನ ಬದುಕಿದೆ…..
[00:59.04] ಭಲೇ ಭಲೇ ಚೆಂದದ ಚೆಂದುಳ್ಳಿ ಹೆಣ್ಣು ನೀನು
[01:04.80] ಮಿಂಚು ಕೂಡ ನಾಚುವ ಮಿಂಚಿನ ಬಳ್ಳಿ ನೀನು
[01:20.29] ನಿನ್ನ ಚಂದ ಹೊಗಳಲು ಪದ ಪುಂಜ ಸಾಲದು
[01:25.81] ನಿನ್ನ ಕಂಗಳ ಕಾಂತಿಗಳಿಂದಾನೆ ತಾನೇನೆ ಊರೆಲ್ಲ ಹೊಂಬೆಳಕು
[01:31.29] ನೀನು ಹೆಜ್ಜೆಯೇ ಇಟ್ಟಲ್ಲಲ್ಲೆಲ್ಲಾನು ಕಾಲಡಿ ಹೂವಾಗಿ ಬರಬೇಕು
[02:20.04] ತಂಪು ತಂಗಾಳಿಯು ತಂದಾನ ಹಾಡಿತು ಕೇಳೋಕೆ ನಾ ಹೋದರೆ
[02:26.30] ನಿನ್ನ ಈ ಸರಿಗಮ ಕೇಳಿತು ಸಮಸಮ ಹಂಚಿತು
[02:34.29] ಝುಳುಝುಳು ನೀರಿಲ್ಲಿ ತಿಲ್ಲಾನ ಹಾಡಿತು ನೋಡೋಕೆ ನಾ ಬಂದರೆ
[02:40.04] ನಿನ್ನದೇ ಥಕಥೈ ಕಂಡಿತು ತಕದಿಮಿ ಹೆಚ್ಚಿತು
[02:48.04] ಅಲ್ಲೊಂದು ಸುಂದರ ತೋಟವಿದೆ ಅಲ್ಲಿ ನೂರಾರು ಹೂಗಳ ರಾಶಿಯಿದೆ
[02:53.55] ಇಲ್ಲೊಂದು ಪ್ರೀತಿಯ ಹಾಡು ಇದೆ ಇಲ್ಲಿ ಹತ್ತಾರು ಮೆಚ್ಚಿನ ಸಾಲು ಇವೆ
[02:58.79] ಎಲ್ಲ ಸಾಲಲ್ಲು ಎಣುಕೋ ಅಕ್ಷರ ನಿಂದೇನ
[03:03.80] ಉತ್ತರ ಇಲ್ಲದ ಸಿಹಿ ಒಗಟು ನಿನ್ನಂದ ನಿನ್ನಂದ ನಿನ್ನಂದವೇ…..
[04:01.54] ಅತ್ತ ಕಾಳಿದಾಸ ಇತ್ತ ರವಿವರ್ಮ ನಿನ್ನ ಹಿಂದೆ ಬಂದರು
[04:07.54] ಅಂದವ ಹೊಗಳಲು ಸಾಧ್ಯವೇ ನಿನ್ನ ಮುಂದೆ ಮೌನವೇ
[04:15.31] ಅತ್ತ ಊರ್ವಶಿಯು ಇತ್ತ ಮೇನಕೆಯು ನಿನ್ನ ನಡೆ ಕಂಡರೆ
[04:21.06] ನಡುವೆ ಉಳುಕುತ್ತೆ ಅಲ್ಲವೇ ನಿನ್ನ ಬಿಟ್ಟರಿಲ್ಲವೆ
[04:28.79] ಅಲ್ಲೊಂದು ರಾಜರ ಬೀದಿಯಿದೆ ನೀನು ಅಲ್ಲಿಂದ ತೇರಲ್ಲಿ ಏರಿ ಬಂದೆ
[04:34.54] ಇಲ್ಲೊಂದು ಹೃದಯ ಕೋಟೆಯಿದೆ ಇಲ್ಲಿ ಎಂತೆಂಥ ಕನಸೋ ಕಾವಲಿದೆ
[04:39.79] ಎಲ್ಲ ಕಾವಲು ದಾಟಿದ ಚೋರಿಯು ನೀನೇನಾ
[04:45.05] ಹತ್ತಿರ ಇದ್ದರು ಬಲು ಎತ್ತರ ಎತ್ತರ ನಿನ್ನಂದ ನಿನ್ನಂದವೆ……
